ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆದ ಕ್ರಮ ಪ್ರಶ್ನಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಕೆ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಸಿಬಿಐ ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ, ಬಿಜೆಪಿ ನಾಯಕ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ.ಕೆ. ಸೋಮಶೇಖರ್, ನ್ಯಾ. ಉಮೇಶ್ ಎಂ ಅಡಿಗರಿದ್ದ ಪೀಠದಲ್ಲಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ.
ರಾಜ್ಯ ಸರ್ಕಾರ ಸಿಬಿಐ ತನಿಖೆ ನೀಡಿದ್ದ ಅನುಮತಿ ಹಿಂಪಡೆದು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಹೀಗಾಗಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.
Next Story