ಮುಡಾ ಪ್ರಕರಣ: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್
ಈಡಿ ಸಮನ್ಸ್ ಗೆ ಹೈಕೋರ್ಟ್ ತಡೆ

Photo credit: PTI
ಧಾರವಾಡ: ಮುಡಾ ಹಗರಣ ಪ್ರಕರಣ ಕುರಿತಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜ.27 ಕ್ಕೆ ವಿಚಾರಣೆಗೆ ಹಾಜರಾಗಲು ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿದೆ.
ಮುಂದಿನ ವಿಚಾರಣೆವರೆಗೆ ಅಂದರೆ ಫೆ. 10ರ ವರೆಗೆ ಈಡಿ ಸಮನ್ಸ್ಗೆ ತಡೆ ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಈಡಿ ನೋಟಿಸ್ ನೀಡಿತ್ತು. ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪಾರ್ವತಿ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಇವರ ಜೊತೆಗೆ ಸಚಿವ ಭೈರತಿ ಸುರೇಶ್ ಅವರಿಗೂ ನೀಡಲಾಗಿದ್ದ ಈಡಿ ಸಮನ್ಸ್ಗೂ ಸಹ ಕೋರ್ಟ್ ತಡೆಯಾಜ್ಞೆ ನೀಡಿದೆ.
Next Story