ಕರ್ನಾಟಕ ವೈದ್ಯಕೀಯ ಕೋರ್ಸ್: ಸೇವಾ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ
ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಪರಿಷತ್‍ನಲ್ಲಿ ಬುಧವಾರ ಅಂಗೀಕಾರ ದೊರೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧೇಯಕವನ್ನು ಚರ್ಚೆಗೆ ಕೋರಿದರು. ಅದರಂತೆ ಸಭಾಪತಿ ಬಸವರಾಜ ಹೊರಟ್ಟಿ, ವಿಧೇಯಕದ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿದರು.
ಚರ್ಚೆಯ ಬಳಿಕ ಸಭಾಪತಿಗಳು ವಿಧೇಯಕವನ್ನು ಮತಕ್ಕೆ ಹಾಕಿದಾಗ ಸದನ ಸದಸ್ಯರು ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದರು. ಆರೋಗ್ಯ ಸಚಿವರು ವಿಧೇಯಕವನ್ನು ಅಂಗೀಕರಿಸಲು ಕೋರಿದ ಬಳಿಕ ಸಭಾಪತಿ ಹೊರಟ್ಟಿ, ವಿಧೇಯಕವು ಅಂಗೀಕಾರವಾಗಿದೆ ಎಂದು ಪ್ರಕಟಿಸಿದರು.
Next Story