ರಾಜ್ಯದಲ್ಲಿ ಹೊಸದಾಗಿ 197 ಡೆಂಗಿ ಪ್ರಕರಣ ಪತ್ತೆ: ಓರ್ವ ಬಲಿ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಾದ್ಯಂತ 197 ಡೆಂಗಿ ಪ್ರಕರಣಗಳು ಸೋಮವಾರದಂದು ಪತ್ತೆಯಾಗಿದ್ದು, ಮೈಸೂರಿನಲ್ಲಿ ಒಬ್ಬರು ಡೆಂಗಿಗೆ ಬಲಿಯಗಿದ್ದಾರೆ. ಒಂದೇ ದಿನ 46 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 892 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0- 1 ವರ್ಷದ ಒಬ್ಬರಿಗೆ, 1-18 ವರ್ಷದ 63 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 133 ಮಂದಿಗೆ ಡೆಂಗಿ ಜ್ವರ ಕಾಣಿಸಿಕೊಂಡಿದೆ.
ಸೋಮವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 115 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 95 ಜನರಿಗೆ ಡೆಂಗಿ ದೃಢಪಟ್ಟಿದೆ. 10 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಬಿಬಿಎಂಪಿ ವ್ಯಾಪ್ತಿಗೆ ಸೇರದ ಬೆಂಗಳೂರು ನಗರ ಜಿಲ್ಲೆಯಲ್ಲಿ 4 ಮಂದಿಗೆ ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಅವರಿಗೆಲ್ಲ ಡೆಂಗಿ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದಾರೆ. ಶಿವಮೊಗ್ಗದಲ್ಲಿ 16 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಅವರಿಗೆಲ್ಲ ಡೆಂಗಿ ದೃಢಪಟ್ಟಿದೆ. ಒಂಭತ್ತು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸೇರಿದ್ದಾರೆ.
ವಿಜಯಪುರದಲ್ಲಿ 46 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗಿ ದೃಢಪಟ್ಟಿದೆ. ಬಾಗಲಕೋಟೆಯಲ್ಲಿ 18 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಮೂವರಿಗೆ ಡೆಂಗಿ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಕನ್ನಡದಲ್ಲಿ ಮೂವರಿಗೆ ಪರೀಕ್ಷೆ ಮಾಡಲಾಗಿದ್ದು, ಅವರಿಗೆಲ್ಲ ಡೆಂಗಿ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯಲ್ಲಿ 178 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 15 ಮಂದಿಗೆ ಡೆಂಗಿ ದೃಢಪಟ್ಟಿದೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಪ್ಪಳದಲ್ಲಿ 17 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗಿ ದೃಢಪಟ್ಟಿದೆ. ಚಾಮರಾಜನಗರದಲ್ಲಿ 147 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 33 ಜನರಿಗೆ ಡೆಂಗಿ ದೃಢಪಟ್ಟಿದೆ. 9 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 68 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಒಬ್ಬರಿಗೆ ಡೆಂಗಿ ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ 236 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 17 ಜನರಿಗೆ ಡೆಂಗಿ ದೃಢಪಟ್ಟಿದೆ. 9 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 55,712 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7362 ಜನರಿಗೆ ಡೆಂಗಿ ದೃಢಪಟ್ಟಿದೆ. 303 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಏಳು ಮಂದಿ ಡೆಂಗಿ ರೋಗಕ್ಕೆ ಬಲಿಯಾಗಿದ್ದಾರೆ.