Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ದೇಶದಲ್ಲಿ ಅತಿಹೆಚ್ಚು...

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Dec 2023 4:02 PM IST
share
ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ದಿನ 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯ ದಿನವನ್ನು ಆಚರಿಸಲಾಗುತ್ತಿದೆ. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಜನವರಿ 5,6,7 ಸಿರಿಧಾನ್ಯ ಮೇಳ:

ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯ ಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜ.5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ ಎಂದರು.

ಸಿರಿಧಾನ್ಯ ಆರೋಗ್ಯಕ್ಕೆ ಒಳ್ಳೆಯದು:

ಮೊದಲನೇ ಮೇಳ ನಡೆದಿದ್ದು 2012 ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. 5 ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ. ಸಿರಿಧಾನ್ಯ ಬಹಳ ಬೇಡಿಕೆಯಲ್ಲಿರುವ ವಸ್ತು. ಮೊದಲು ರಾಗಿ, ಜೋಳ, ನವಣೆ, ಸಾಮೆ, ಆರ್ಕವನ್ನು ಬೆಳೆಯುತ್ತಿದ್ದೆವು . ನಂತರ ಕಡಿಮೆಯಾಗುತ್ತಾ ಬಂದಿತು. ಮಳೆ ಕಡಿಮೆಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಕಾರ್ಬೊಹೈಡ್ರೇಟ್ಸ್ ಕಡಿಮೆಯಿದ್ದು, ಲವಣಾಂಶ ಮತ್ತು ನಾರಿನಂಶ ಹೇರಳವಾಗಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಬಾಧ್ಯಕ್ಷರ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X