ವಿಧಾನಮಂಡಲ ಅಧಿವೇಶನ ಜು.21ರವರೆಗೆ ವಿಸ್ತರಣೆ, ಜು.7ಕ್ಕೆ ಬಜೆಟ್ ಮಂಡನೆ: ಸ್ಪೀಕರ್ ಯು.ಟಿ.ಖಾದರ್
ಬೆಂಗಳೂರು,ಜು.4: ವಿಧಾನ ಮಂಡಲದ ಅಧಿವೇಶನವು 21ನೇ ಜುಲೈ 2023ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಇಂದು ವಿಧಾನಸಭೆಯ ಕಲಾಪದ ಮಧ್ಯೆ ಈ ಬಗ್ಗೆ ಮಾಹಿತಿ ನೀಡಿದ ಸಭಾಧ್ಯಕ್ಷರು, 'ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ' ಎಂದರು.
'ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ' ಎಂದು ತಿಳಿಸಿದರು.
Next Story