ಕಾವೇರಿ ಹೋರಾಟ | ಮಣ್ಣು ಬಾಯಿಗೆ ಹಾಕಿ ಬಿಜೆಪಿ ಕಾರ್ಯಕರ್ತನಿಂದ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ʼಜಿಲ್ಲಾ ಹಿತರಕ್ಷಣಾ ಸಮಿತಿʼ ಶನಿವಾರ ಕರೆ ನೀಡಿದ್ದ ಮಂಡ್ಯ, ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಈ ನಡುವೆ ಬಿಜೆಪಿ ಕಾರ್ಯಕರ್ತರೊಬ್ಬರು ಮಣ್ಣು ಬಾಯಿಗೆ ಹಾಕಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ʼʼರೈತರ ಬಾಯಿಗೆ ಮಣ್ಣು ಹಾಕಿದರಲ್ಲಪ್ಪೋ ಸರಕಾರʼʼ ಎಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಷೋಷಣೆ ಕೂಗಿದರು.
ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಇಂದು ಬೆಳಗ್ಗೆ 8 ಗಂಟೆಯಿಂದಲೇ ರೈತರ ಕಾವೇರಿ ಹೋರಾಟ ಆರಂಭವಾಗಿದ್ದು, ಮಂಡ್ಯ ನಗರ ಬಂದ್‌ಗೆ ವರ್ತಕರು, ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಪ್ರತಿಭಟನೆ ಕಾರಣ ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ.
Next Story