ಸಂತ್ರಸ್ತೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ.
ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದು, ತೀರ್ಪು ಪ್ರಕಟಿಸುವವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಣೆ ಮಾಡಿದೆ. ವಿಚಾರಣೆ ವೇಳೆ ಸರ್ಕಾರ ಪರ ವಕೀಲರು ಭವಾನಿ ರೇವಣ್ಣ ತನಿಖೆ ಸೂಕ್ತವಾಗಿ ಸಹಕರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ವಾದಿಸಿದ್ದಾರೆ.
Next Story