ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ
ಕೆ.ಮರೀಗೌಡ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಹೊತ್ತಲ್ಲೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ, ಅವರ ಪತ್ನಿ, ಬಾಮೈದ ಮತ್ತು ಜಮೀನುದಾರರ ಮೇಲೆ ಲೋಕಾಯುಕ್ತದಲ್ಲಿ ಎಫ್.ಐ.ಆರ್ ದಾಖಲಾಗಿತ್ತು.
ಲೋಕಾಯುಕ್ತ ತನಿಖೆ ಚುರುಕುಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಸೂಚನೆ ಮೇರೆಗೆ ಬುಧವಾರ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಮುಡಾ ಅಧ್ಯಕ್ಷ ಕೆ.ಮರೀಗೌಡ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
Next Story