ಕೊಡಗು: ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಕೊಡಗು, ಆ.17: ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ದಾಳಿ ನಡೆದಿದೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಂಜುಂಡೇಗೌಡರ ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಚಿನ್ನಾಭರಣ, ಅಪಾರ ಪ್ರಮಾಣದ ನಗದು ಪತ್ತೆಹಚ್ಚಿದ್ದಾರೆ.
ಲೋಕಾಯುಕ್ತ ಎಸ್ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪವನ್ ಕುಮಾರ್, ಇನ್ ಸ್ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ.
ಇದೇವೇಳೆ ಪಿರಿಯಾಪಟ್ಟಣದಲ್ಲಿರುವ ನಂಜುಂಡೇಗೌಡರ ಮಾವನ ಮನೆ ಹಾಗೂ ಮೈಸೂರಿನಲ್ಲಿರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ಧಾಳಿ ನಡೆಸಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ.
Next Story