ಕೊಡವ ಬುಡಕಟ್ಟು ಸಮುದಾಯ ಎಸ್ಟಿಗೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ: ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಜು.15: 'ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್‍ಟಿ)ಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ ಮಂಡಳಿ ನಿಯೋಗವು ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕೊಡಗರು’ ಎಂದು ನಮೂದಾಗಿರುವ ಕೊಡವ ಸಮುದಾಯದ ಹೆಸರನ್ನು ‘ಕೊಡವ’ ಎಂದು ತಿದ್ದುಪಡಿ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೊಡವ ರಾಷ್ಟ್ರೀಯ ಮಂಡಳಿ ಮುಖ್ಯಸ್ಥ ಎನ್.ಯು.ನಾಚಪ್ಪ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಕೆ.ಟಿ.ಪೆಮ್ಮಯ್ಯ, ಉಪಾಧ್ಯಕ್ಷ ಕರ್ನಲ್ ವಿವೇಕ್ ಮುತ್ತಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story