ವಿಪಕ್ಷ ನಾಯಕನ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡಬೇಕು: ಶಾಸಕ ಯತ್ನಾಳ್ ಪಟ್ಟು
''ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ''
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕ್ಕೆ ಕೊಡಬೇಕು, ಅದರಲ್ಲಿ ರಾಜಿ ಇಲ್ಲ. ದಕ್ಷಿಣ ಕರ್ನಾಟಕದವರೇ ಆಗಬೇಕಾ? ಎಂದು ಪ್ರಶ್ನಿಸಿದ ಯತ್ನಾಳ್, ಉತ್ತರ ಕರ್ನಾಟಕಕ್ಕೆ ಅವಕಾಶ ಕೊಡದಿದ್ದರೆ ಜನ ತೀರ್ಮಾನ ಮಾಡುತ್ತಾರೆ, ಆಗ ನಾವೂ ತೀರ್ಮಾನ ಮಾಡುತ್ತೇವೆ'' ಎಂದು ಪಟ್ಟು ಹಿಡಿದಿದ್ದಾರೆ.
''ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ. ಇದನ್ನು ನಾವು ಕೂಡ ಒಪ್ಪುವುದಿಲ್ಲ. ಬಿಜೆಪಿಗಾಗಿ, ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ನಾನು ಪ್ರಾಣ ಕೊಡಲೂ ಸಿದ್ಧ. ಆದರೆ ಕೆಲ ಚೇಲಾಗಳ ಮಾತು ಕೇಳಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬಾರದು'' ಎಂದು ಆಕ್ರೋಶ ವ್ಯಕ್ತಪಡಿಸಿದರು.
Next Story