ಎಚ್ಎಂಟಿ ಭೂಮಿ ವಶಕ್ಕೆ ಪಡೆದ ರಾಜ್ಯ ಸರಕಾರದ ವಿರುದ್ಧ ಕಾನೂನು ಹೋರಾಟ : ಎಚ್ಡಿಕೆ
ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ನಗರದ ಜಾಲಹಳ್ಳಿಯಲ್ಲಿ ಎಚ್ಎಂಟಿ ಕಂಪನಿಗೆ ಸೇರಿದ ಐದು ಎಕರೆ ಭೂಮಿಯನ್ನು ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ಎಂಟಿ ಜಮೀನು ವಶ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯ ಸರಕಾರಕ್ಕೆ ಹಿನ್ನೆಡೆ ಆಗುವುದು ಖಚಿತ ಎಂದರು.
ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು ಅದರ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಮನ ಹರಿಸಲಿ. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ನಿನ್ನೆ ಐದು ಎಕರೆಗೆ ಬಲವಂತವಾಗಿ ಹೋಗಿ ಫೆನ್ಸಿಂಗ್ ಹಾಕಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಎಚ್ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
Next Story