ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ
Photo: PTI
ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್ 13ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಮಾಜಿ ಶಾಸಕ ಸಿ.ಟಿ.ರವಿ, ಪರಿತ್ತಿನ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮರಾಠ ಅಭಿವೃದ್ಧಿ ನಿಮಗದ ಮಾಜಿ ಎಂ.ಜಿ.ಮುಳೆ ಅವರ ಹೆಸರುಗಳನ್ನು ಬಿಜೆಪಿ ಪ್ರಕಟಿಸಿದೆ.
ಮಾಜಿ ಸಚಿವ ಸಿ.ಟಿ. ರವಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದರು. ಆ ಬಳಿಕ ಅವರ ಹೆಸರು ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಅವರನ್ನು ಇದೀಗ ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಲು ಬಯಸಿದೆ.
ಎನ್.ರವಿಕುಮಾರ್ ಅವರಿಗೆ ವಿಧಾನ ಪರಿಷತ್ ಅನ್ನು ಪ್ರತಿನಿಧಿಸಲು ಮತ್ತೊಮ್ಮೆ ಅವಕಾಶ ಸಿಕ್ಕಿದೆ. ವಿಧಾನ ಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ (ಜೂ.3) ಕೊನೆಯ ದಿನವಾಗಿದೆ. ಲೋಕಸಭೆ ಚುನಾವಣೆ ಮುಕ್ತಾಯವಾಗುವವರೆಗೂ ಕಾದಿದ್ದ ಬಿಜೆಪಿ, ಇದೀಗ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಬಿಜೆಪಿಯಲ್ಲಿ 40ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ಆದರೆ, ಅಂತಿಮವಾಗಿ ಜಾತಿಯ ಲೆಕ್ಕಾಚಾರ ಹಾಗೂ ಪಕ್ಷ ಸಂಘಟನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದ ಹೈಕಮಾಂಡ್ ಮೇಲ್ಕಂಡ ಮೂವರ ಹೆಸರುಗಳನ್ನು ಅಂತಿಮವಾಗಿ ಪ್ರಕಟಿಸಿದೆ.