Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫೆ.12ರಿಂದ ವಿಧಾನ ಮಂಡಲ ಅಧಿವೇಶನ;...

ಫೆ.12ರಿಂದ ವಿಧಾನ ಮಂಡಲ ಅಧಿವೇಶನ; ಫೆ.9ಕ್ಕೆ ಶಾಸಕರು, ಮಾಧ್ಯಮ ಪ್ರತಿನಿಧಿಗಳಿಗೆ ತರಬೇತಿ: ಸ್ಪೀಕರ್ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ5 Feb 2024 6:47 PM IST
share
ಫೆ.12ರಿಂದ ವಿಧಾನ ಮಂಡಲ ಅಧಿವೇಶನ; ಫೆ.9ಕ್ಕೆ ಶಾಸಕರು, ಮಾಧ್ಯಮ ಪ್ರತಿನಿಧಿಗಳಿಗೆ ತರಬೇತಿ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ವಿಧಾನಮಂಡಲದ ಅಧಿವೇಶನ ಫೆ.12ರಂದು ಆರಂಭಗೊಳ್ಳಲಿದೆ. ಅಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.16ರಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.

ಶಾಸಕರಿಗೆ ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಮತ್ತು ಬಜೆಟ್ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ವಿವರಿಸಿದ ಸ್ಪೀಕರ್, ಈ ತರಬೇತಿ ಕಾರ್ಯಾಗಾರವನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದಾರೆ ಎಂದರು.

ರಾಜ್ಯಪಾಲರ ಭಾಷಣದ ನಂತರ, ಅಗಲಿದ ಗಣ್ಯ ವ್ಯಕ್ತಿಗಳೀಗೆ ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಿ, ಅಂಗೀಕರಿಸಲಾಗುವುದು. ಸರಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು ಎಂದು ಖಾದರ್ ಹೇಳಿದರು.

10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರ ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.

ಶಾಸಕರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳಿಗಾಗಿ ವಿಧಾನಸಭೆಯ ಸಭಾಂಗಣದಲ್ಲಿದ್ದ ಕ್ಯಾಂಟಿನ್ ಸೌಲಭ್ಯವನ್ನು ಈ ಹಿಂದಿನಂತೆ ವಿಧಾನಸೌಧದ ಮೊದಲನೆ ಮಹಡಿಯ ಪೂರ್ವಭಾಗದಲ್ಲಿರುವ ಸೆಂಟ್ರಲ್ ಹಾಲ್‍ನಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸದನದಲ್ಲಿ ಉತ್ತರಿಸಲಾಗುವ ಪ್ರಶ್ನೆಗಳು, ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು, ಇತ್ಯಾದಿ ಸೂಚನೆಗಳನ್ನು, ಸರಕಾರ ನೀಡುವ ಲಿಖಿತ ಉತ್ತರಗಳನ್ನು ಸದನದಲ್ಲಿ ಮಂಡಿಸಿದ ತರುವಾಯ ಸದಸ್ಯರಿಗೆ ಹಾಗೂ ಪತ್ರಕರ್ತರಿಗೆ ಇ-ಮೇಲ್ ಮುಖಾಂತರ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಪತ್ರಕರ್ತರಿಗೆ ವಾರ್ತಾ ಇಲಾಖೆಯ ಮುಖಾಂತರ ಇ-ಮೇಲ್ ಕಳುಹಿಸಲಾಗುವುದು. ಅಲ್ಲದೇ ಸಚಿವಾಲಯದ ವೆಬ್‍ಸೈಟಿನಲ್ಲಿಯೂ ದೊರೆಯುತ್ತದೆ ಎಂದು ಖಾದರ್ ತಿಳಿಸಿದರು.

ಶಾಸಕರಿಗೆ ವೈವಿಧ್ಯಮಯ ಭೋಜನ: ಅಧಿವೇಶನ ಆರಂಭವಾದಾಗಿನಿಂದ ಮುಕ್ತಾಯವಾಗುವವರೆಗೆ 10 ದಿನಗಳ ಕಾಲ ಬೆಳಗ್ಗೆ 8ರಿಂದ 9ರ ವರೆಗೆ ಸದನದ ಸದಸ್ಯರಿಗೆ ಲಘು ಉಪಹಾರ ಮತ್ತು ನಿತ್ಯ ಮಧ್ಯಾಹ್ನ ಬೆಂಗಳೂರಿನ ವಿವಿಧ ಹೊಟೇಲ್‍ಗಳ ವೈವಿಧ್ಯಮಯವಾದ ರುಚಿಕರ, ಆರೋಗ್ಯ ಪೂರ್ಣವಾದ ಭೋಜನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಸ್ಪೀಕರ್ ವಿವರಿಸಿದರು.

ಸಂಸತ್ ಭವನದ ಒಳಗೆ ನಡೆದಂತಹ ಭ್ರದತಾ ಲೋಪದ ಹಿನ್ನೆಲೆಯಲ್ಲಿ, ವಿಧಾನಸೌಧದಲ್ಲಿಯೂ ಅಧಿವೇಶನ ನಡೆಯುವ ಸಂದರ್ಭದಲ್ಲಿ ಭದ್ರತೆಯನ್ನು ಇನ್ನಷ್ಟು ಉತ್ತಮಗೊಳಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಖಾದರ್ ತಿಳಿಸಿದರು.

ಶಾಸಕ ಕ್ಲಬ್ ಸ್ಥಾಪನೆ: ‘ಶಾಸಕರು ಅಧಿವೇಶನ ಹೊರತುಪಡಿಸಿ ಬೇರೆ ಸಂದರ್ಭದಲ್ಲಿಯೂ ರಾಯಚೂರು, ಕಲಬುರಗಿ, ಮಂಗಳೂರು ಸೇರಿದಂತೆ ರಾಜ್ಯದ ಬೇರೆ ಕಡೆಯಿಂದ ಬೆಂಗಳೂರಿಗೆ ಬರುತ್ತಾರೆ. ಅವರು ಕೂತು ಮಾತುಕತೆ ನಡೆಸಲು ಸೂಕ್ತವಾದ ಸ್ಥಳವಿಲ್ಲ. ಮಹಿಳಾ ಸದಸ್ಯರಿಗೆ ಪ್ರತ್ಯೇಕ ಜಾಗ ಇಲ್ಲ. ನಾಲ್ಕೈದು ಜನ ಶಾಸಕರು ಏನಾದರೂ ಮಾತನಾಡಬೇಕಾದರೆ ಹೊಟೇಲ್‍ಗೆ ಹೋದರೆ ಮಾಧ್ಯಮಗಳಲ್ಲಿ ಬ್ರೇಕಿಂಗ್ ನ್ಯೂಸ್ ಬರುತ್ತೆ. ಆದುದರಿಂದ, ದಿಲ್ಲಿಯಲ್ಲಿ ಸಂಸದರಿಗೆ ಇರುವಂತಹ ಕಾನ್ಸ್ ಸ್ಟಿಟ್ಯೂಷನ್ ಕ್ಲಬ್ ಮಾದರಿಯಲ್ಲೇ ಉತ್ತ್ತಮ ಸೌಲಭ್ಯಗಳ್ಳುಳ್ಳ ಶಾಸಕರ ಕ್ಲಬ್ ಸ್ಥಾಪಿಸಲಾಗುವುದು. ಈ ಕುರಿತು ಈಗಾಗಲೆ ಕಡತ ಸಿದ್ಧವಾಗಿದೆ’

ಯು.ಟಿ.ಖಾದರ್, ಸ್ಪೀಕರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X