ಕೇಂದ್ರ ಸರಕಾರ ಐಸಿಡಿಎಸ್ ಕಾರ್ಯಕ್ರಮ ಪುನರ್ ವಿಮರ್ಶಿಸಲಿ: ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ: ಅನೇಕ ವರ್ಷಗಳಿಂದ ಜಾರಿಯಲ್ಲಿರುವ ಐಸಿಡಿಎಸ್ ಕಾರ್ಯಕ್ರಮವನ್ನು ಕೇಂದ್ರ ಸರಕಾರ ಪುನರ್ ವಿಮರ್ಶೆ ಮಾಡಬೇಕು ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಶನಿವಾರ ನಗರದಲ್ಲಿ ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಗೌರವ ಧನದಲ್ಲಿ ದುಡಿಯುವ ಅಂಗನವಾಡಿ ನೌಕರರ. ಬಿಸಿಯೂಟ ತಯಾರಕರ ಮತ್ತು ಸಂಜೀವಿನಿ ಗ್ರಾಮ ಪಂಚಾಯತಿ ಮಹಿಳಾ ಒಕ್ಕೂಟದ ನೌಕರರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಮಕ್ಕಳು ಹುಟ್ಟುವುದು. ಅಂಗನವಾಡಿಗೆ ಹೋಗುವುದು, ದೊಡ್ಡವರಾಗುವುದು ನಿಲ್ಲುವುದಿಲ್ಲ. ಶಾಲೆ, ಕಾಲೇಜು ಶಿಕ್ಷಣ ಕಲಿಯುತ್ತವೆ. ಮಕ್ಕಳ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರ ಬದುಕು ಹಸನಾಗಬೇಕು. ಸ್ವಾಭಿಮಾನದ ಹಾಗೂ ಸ್ವಾವಲಂಬನೆಯ ಬದುಕು ನಿಮ್ಮದಾಗಬೇಕು. ಆ ನಿಟ್ಟಿನಲ್ಲಿ ನಿಮ್ಮ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಈ ದೇಶದಲ್ಲಿ ಮಕ್ಕಳ ಭವಿಷ್ಯವನ್ನು ನಿರ್ಧಾರ ಮಾಡುವ, ರೂಪಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಈ ದೇಶದ ಭವಿಷ್ಯವನ್ನು ರಾಜಕಾರಣಿಗಳು, ಶಾಸಕರು, ಸಂಸದರು ಬರೆಯುವುದಿಲ್ಲ. ತಾಯಂದಿರು, ಅಂಗನವಾಡಿ ಕಾರ್ಯಕರ್ತರು ಬರೆಯುತ್ತಾರೆ. ಅವರು ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿ ಯಾವ ರೀತಿಯ ಪಾಠ ಮಾಡುತ್ತಾರೆ. ಆ ರೀತಿ ಮಕ್ಕಳು ಬೆಳೆಯುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ಪ್ರಮುಖರಿದ್ದರು.