ಲೋಕಾಯುಕ್ತ ದಾಳಿ: ಭೂಮಾಪನ ಇಲಾಖೆ ಅಧೀಕ್ಷಕನಿಗೆ ಸೇರಿದ ಐದು ಮದ್ಯದಂಗಡಿಗಳು ಪತ್ತೆ
ಬೆಂಗಳೂರು, ಆ.22: ಕೆ.ಆರ್. ಪುರ ತಾಲೂಕಿನ ಭೂಮಾಪನ ಇಲಾಖೆ ಅಧೀಕ್ಷಕ ಕೆ.ಟಿ. ಶ್ರೀನಿವಾಸ ಮೂರ್ತಿ ಐದು ಮದ್ಯದಂಗಡಿಗಳನ್ನು ಹೊಂದಿರುವುದನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಲ್ಲಿ ಕೆ.ಟಿ. ಶ್ರೀನಿವಾಸ ಮೂರ್ತಿ ವಿರುದ್ಧ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಬೆಂಗಳೂರು ಮತ್ತು ತುಮಕೂರು ಜಿಲ್ಲೆಯ 14 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಈ ವೇಳೆ ತುಮಕೂರು ಜಿಲ್ಲೆಯ ಐದು ಕಡೆ ಶ್ರೀನಿವಾಸಮೂರ್ತಿ ಮದ್ಯದಂಗಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ ಬೆಂಗಳೂರಿನ ಹೆಣ್ಣೂರು, ಕೊತ್ತನೂರಿನಲ್ಲಿ ನಿವೇಶನ, ನಿರ್ಮಾಣ ಹಂತದ ಕಟ್ಟಡ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಆಸ್ತಿ ಪತ್ತೆಯಾಗಿರುವುದಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story