ಫೈನಲ್ ಪಂದ್ಯದಲ್ಲಿ ಭಾರತದ ಗೆಲುವನ್ನು ಸಂಭ್ರಮಿಸಲು ಕಾತುರನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನ.19 ರಂದು ಅಹಮದಾಬಾದ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತದ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ. ಈ ಬಗ್ಗೆ X ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು "ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ" ಎಂದು ಬರೆದುಕೊಂಡಿದ್ದಾರೆ.
“ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ” ಎಂದು ಭಾರತದ ಗೆಲುವಿಗೆ ಹಾರೈಸಿ ಟ್ವೀಟ್ ಮಾಡಿದ್ದಾರೆ.
“ವಿಶ್ವಕಪ್ ಕ್ರಿಕೆಟ್ - 2023ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತೀಯ ತಂಡಕ್ಕೆ ಶುಭ ಹಾರೈಕೆಗಳು. ನನ್ನಂತಹ 140 ಕೋಟಿ ಭಾರತೀಯರ ಹರಕೆ, ಹಾರೈಕೆ ನಿಮ್ಮೊಂದಿಗಿದೆ. ಗೆಲುವಿನ ಅಭಿಯಾನ ಮುಂದುವರಿಯಲಿ.”
ಸಿದ್ದರಾಮಯ್ಯ
ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ
ನ.19 ರಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯ ನಡುವೆ 2023 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ.
ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.
— CM of Karnataka (@CMofKarnataka) November 18, 2023
ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.
Best wishes to team INDIA..
-… pic.twitter.com/BIgj6fr3re