ರಾಜಕೀಯಕ್ಕಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ: ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು ಪೃಥ್ವಿ ಸಿಂಗ್ ಮೇಲಿನ ಹಲ್ಲೆ ವಿಚಾರವಾಗಿ ಗದ್ದಲ ಸೃಷ್ಟಿಸಿದ ಬಗ್ಗೆ ಶುಕ್ರವಾರ ಸುವರ್ಣ ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ಅದೆಲ್ಲವೂ ಸುಳ್ಳು ಆರೋಪ. ಯಾವುದೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿಲ್ಲ. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಕಥೆ. ರಾಜಕೀಯ ಉದ್ದೇಶಕ್ಕೆ ಈ ವಿಚಾರವನ್ನು ಎತ್ತುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ತೆಲಂಗಾಣ ಚುನಾವಣೆಯ ಜವಾಬ್ದಾರಿಯ ನಿರ್ವಹಣೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತೆಲಂಗಾಣದ ಜವಾಬ್ದಾರಿಯನ್ನು ನಿಭಾಯಿಸಿದ್ದು ನಾನಲ್ಲ. ನನ್ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನಿಭಾಯಿಸಿದರು ಎಂದು ತಿಳಿಸಿದರು.
Next Story