ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ; ಜ.26ರವರೆಗೆ ಕಾದು ನೋಡಿ: ಶಾಸಕ ಲಕ್ಷ್ಮಣ ಸವದಿ
ಬಾಗಲಕೋಟೆ: 'ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ' ಎಂದು ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪಕ್ಷಕ್ಕೆ ಯಾರು ಬರಲಿದ್ದಾರೆ ಎಂಬುದಕ್ಕೆ ಜ.26ರವರೆಗೆ ಕಾದು ನೋಡಿ. ಅವರು ಪಕ್ಷಕ್ಕೆ ಬಂದಮೇಲೆ ಸ್ಥಾನಮಾನ ಬಗ್ಗೆ ಚಿಂತನೆ ಮಾಡಬೇಕು. ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು. ಆ ನಿಟ್ಟಿನಲ್ಲಿ ಆಯಾ ಕ್ಷೇತ್ರದ ನಮ್ಮ ಮುಖಂಡರ ಜೊತೆ ಚರ್ಚಿಸುತ್ತೇವೆ'' ಎಂದು ಹೇಳಿದ್ದಾರೆ.
''ಸ್ವಇಚ್ಛೆಯಿಂದ ಬರುವವರನ್ನು ಗೌರವದಿಂದ ಬರಮಾಡಿಕೊಳ್ಳುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು'' ಎಂದು ಅವರು ಹೇಳಿದ್ದಾರೆ.
Next Story