Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಪೈಲಟ್ ತರಬೇತಿ ಸಂಸ್ಥೆ...

ರಾಜ್ಯದಲ್ಲಿ ಪೈಲಟ್ ತರಬೇತಿ ಸಂಸ್ಥೆ ಸ್ಥಾಪಿಸಲು ಬೋಯಿಂಗ್ ಕಂಪೆನಿಗೆ ಎಂ.ಬಿ. ಪಾಟೀಲ್ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 Sept 2023 7:35 PM IST
share
ರಾಜ್ಯದಲ್ಲಿ ಪೈಲಟ್ ತರಬೇತಿ ಸಂಸ್ಥೆ ಸ್ಥಾಪಿಸಲು ಬೋಯಿಂಗ್ ಕಂಪೆನಿಗೆ ಎಂ.ಬಿ. ಪಾಟೀಲ್ ಆಹ್ವಾನ

ವಾಷಿಂಗ್ಟನ್ ಡಿಸಿ: ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗವು ಮಂಗಳವಾರ ಐಎಂಎಫ್ (ಅಂತರ್‍ರಾಷ್ಟ್ರೀಯ ಹಣಕಾಸು ನಿಧಿ) ಜೊತೆ ಮಹತ್ವದ ಮಾತುಕತೆ ನಡೆಸಿತು. ಜಾಗತಿಕ ಕಂಪೆನಿಗಳು ಅನುಸರಿಸುತ್ತಿರುವ ‘ಚೀನಾ+ಒನ್’ ಕಾರ್ಯಾಚರಣೆ ತಂತ್ರದ ಸದುಪಯೋಗ ಪಡೆಯಲು ಕರ್ನಾಟಕಕ್ಕೆ ಇರುವ ಅನುಕೂಲತೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಐಎಂಎಫ್ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಮತ್ತಿತರರು ಪಾಲ್ಗೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಬೆಳವಣಿಗೆ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆಯನ್ನೂ ನಡೆಸಲಾಯಿತು.

ಪ್ರಮುಖ ಎಂ.ಎನ್.ಸಿ ಕಂಪೆನಿಗಳು ಚೀನಾದಲ್ಲಿ ತಾವು ಹೊಂದಿರುವ ತಯಾರಿಕಾ ಘಟಕದ ಜೊತೆಗೆ ಬೇರೆ ದೇಶದಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಯೋಜನೆಗಳನ್ನು ಹಾಕಿಕೊಳ್ಳುತ್ತಿವೆ (ಚೀನಾ+ ಒನ್ ನೀತಿ). ಈ ಸಂಬಂಧ ಭಾರತವು ಜಾಗತಿಕ ಕಂಪೆನಿಗಳ ಗಮನ ಸೆಳೆದಿದ್ದು, ಕರ್ನಾಟಕವು ಆಯಕಟ್ಟಿನ ಸ್ಥಳವಾಗಿದೆ ಎಂಬ ಬಗ್ಗೆ ಎಂ.ಬಿ.ಪಾಟೀಲ್ ಸಭೆಯ ಗಮನ ಸೆಳೆದರು.

ಇದೆ ವೇಳೆ, ಬೆಂಗಳೂರಿಗೆ ಹೆಚ್ಚಿನ ಹೂಡಿಕೆಯನ್ನು ಸೆಳೆಯುವ ನಿಟ್ಟಿನಲ್ಲಿ ನಗರದ ದಟ್ಟಣೆಯನ್ನು ತಗ್ಗಿಸುವ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕೌಶಲ್ಯಯುಕ್ತ ಕಾರ್ಮಿಕರ ಸಂಖ್ಯೆಯಲ್ಲಿ ಕೊರತೆ ಉಂಟಾಗದಂತಹ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಎಂ.ಬಿ.ಪಾಟೀಲ್ ಒತ್ತಿ ಹೇಳಿದರು.

ಮುಂಚೂಣಿ ವಿಮಾನ ತಯಾರಿಕಾ ಕಂಪೆನಿ ಬೋಯಿಂಗ್ ಜೊತೆ ನಡೆದ ಸಭೆಯಲ್ಲಿ ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರಗಳ ಸ್ಥಾಪನೆ, ಪೈಲಟ್ ಹಾಗೂ ವಿಮಾನ ಸಿಬ್ಬಂದಿ ತರಬೇತಿ ಕ್ಷೇತ್ರದಲ್ಲಿ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಗಮನ ಸೆಳೆಯಲಾಯಿತು.

ಯುಎಸ್‍ಐಎಸ್ ಪಿಎಫ್ (ಯುಎಸ್- ಇಂಡಿಯಾ ಸ್ಟ್ರಾಟೆಜಿಕ್ ಪಾಟ್ರ್ನರ್ಶಿಪ್ ಫೋರಂ) ಜೊತೆ ನಡೆದ ಸಭೆಯಲ್ಲಿ ಬೆಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ನಿರ್ಮಾಣವಾಗಲಿರುವ ಆರೋಗ್ಯ ತಂತ್ರಜ್ಞಾನ ಪಾರ್ಕ್ ನಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಅವಲೋಕಿಸಲಾಯಿತು.

ಕರ್ನಾಟಕದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪೂರಕವಾದ ನೀತಿಗಳನ್ನು ಅನುಸರಿಸುವ ಅಗತ್ಯವಿದೆ ಎಂಬ ಸಲಹೆ ಸಭೆಯಲ್ಲಿದ್ದವರಿಂದ ವ್ಯಕ್ತವಾಯಿತು. ಯುಎಸ್‍ಐಎಸ್ ಪಿಎಫ್ ಪ್ರತಿನಿಧಿಗಳನ್ನು ಉದ್ದೇಶಿಸಿ ಎಂ.ಬಿಪಾಟೀಲ್ ಮಾತನಾಡಿ, ಇ-ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಮುಂದಿರುವ ಕೆಲವು ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನದ ನೆರವು ಪಡೆಯಲು ಸಮರ್ಥ ಪಾಲುದಾರಿಕೆಗಾಗಿ ಶೋಧನೆ ನಡೆಸಲಾಗುವುದು ಎಂದರು.

ಇಂಡಸ್ಟ್ರಿ 4.0 ಸಂಬಂಧಿಸಿದ ಕೌಶಲಗಳ ಕಲಿಕೆಗೆ ಪೂರಕವಾಗಿ ತರಬೇತಿ ಪಠ್ಯಕ್ರಮಗಳನ್ನು ಸಿದ್ದಪಡಿಸುವ ಬಗ್ಗೆಯೂ ವಿಚಾರ ವಿನಿಮಯ ನಡೆಯಿತು. ಜಿಇ ವೆರ್ನೋವ ಜೊತೆಗಿನ ಸಭೆಯಲ್ಲಿ ಕರ್ನಾಟಕದಲ್ಲಿ ಕಾಂಪೋನೆಂಟ್ ಗಳ ತಯಾರಿಕೆಗೆ ಇರುವ ಅವಕಾಶಗಳ ಬಗ್ಗೆ ಗಮನಹರಿಸಲಾಯಿತು. ಜೊತೆಗೆ, ಸೌರಶಕ್ತಿ, ಪವನ ಶಕ್ತಿ ಮತ್ತಿತರ ಪರ್ಯಾಯ ಇಂಧನಗಳ ಸಂಗ್ರಹ ವ್ಯವಸ್ಥೆ ಸ್ಥಾಪನೆ ಸಂಬಂಧ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಜಿಇ ಹೆಲ್ತ್ ಕೇರ್ ದೊಂದಿಗಿನ ಸಭೆಯಲ್ಲಿ ಮುಂಬರುವ ದಶಕದಲ್ಲಿ ಜೀವ ವಿಜ್ಞಾನಗಳ ಕ್ಷೇತ್ರದಲ್ಲಿ ಎಐ/ಎಂಎಲ್ ನಿರ್ಣಾಯಕ ಪಾತ್ರ ವಹಿಸಲಿರುವ ನಿರೀಕ್ಷೆಯಿರುವುದರಿಂದ ಅದಕ್ಕೆ ತಕ್ಕಂತೆ ಉದ್ಯೋಗಿಗಳ ಕೌಶಲವನ್ನು ಮೇಲ್ದರ್ಜೆಗೇರಿಸಲು ಸಹಭಾಗಿತ್ವಗಳನ್ನು ಸಾಧಿಸುವ ಬಗ್ಗೆ ಚರ್ಚಿಸಲಾಯಿತು.

ಬೋಯಿಂಗ್ ಉಪಾಧ್ಯಕ್ಷರಾದ ಗ್ರೆಟಾ ಲಂಡ್ ಬರ್ಗ್, ನಿರ್ದೇಶಕರಾದ ನಿಕೋಲ ಪೊರ್ರೆಕಾ, ಯುಎಸ್‍ಐ ಪಿಎಫ್ ಸಿಇಒ ಮುಕೇಶ್ ಅಘಿ, ಉಪಾಧ್ಯಕ್ಷರಾದ ಸೂಸನ್ ರಿಚಿ, ಜಿಇ ವೆರ್ನೋವಾ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್ ಪಿಕ್ಯಾರ್ಟ್ ಮತ್ತಿತರರು ಸಭೆಯಲ್ಲಿ ಪಾಲ್ಕೊಂಡಿದ್ದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಸಭೆಗಳಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X