ಮೈಕ್ರೋ ಫೈನಾನ್ಸ್‌ಗಳಿಂದ ತೊಂದರೆ | ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಡೆಗಟ್ಟಲು ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಉಪಟಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ.
ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸುಗ್ರೀವಾಜ್ಞೆ ತರಲು ಮುಖ್ಯಮಂತ್ರಿಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆʼ ಎಂದು ತಿಳಿಸಿದರು.
Next Story