Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ...

ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು: ಆಸ್ತಿ ವರ್ಗಾವಣೆ ರದ್ದತಿಗೆ ಸಚಿವ ಶರಣ ಪ್ರಕಾಶ್​ ಪಾಟೀಲ್​ ಸೂಚನೆ

ದೂರು ಸಲ್ಲಿಸಲು ಇಲಾಖಾ ವ್ಯಾಪ್ತಿಯ ಆಸ್ಪತ್ರೆಯ ನಿರ್ದೇಶಕರಿಗೆ ಸೂಚಿಸಿದ ಸಚಿವರು

ವಾರ್ತಾಭಾರತಿವಾರ್ತಾಭಾರತಿ16 March 2025 2:41 PM IST
share
ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು: ಆಸ್ತಿ ವರ್ಗಾವಣೆ ರದ್ದತಿಗೆ ಸಚಿವ ಶರಣ ಪ್ರಕಾಶ್​ ಪಾಟೀಲ್​ ಸೂಚನೆ

ಬೆಂಗಳೂರು, ಮಾ 16: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್ ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ.

ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು. ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್ ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದರು.

ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ "ಬ್ರೇಕ್" ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ.

ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡು ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.

ನಮ್ಮ ಮಕ್ಕಳು ನಮ್ಮನ್ನು ನೋಡಿಕೊಳ್ಳಲು ಆಗದೇ, ತೊರೆದಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ನಮ್ಮನ್ನು ಇಲ್ಲಿ ಬಿಟ್ಟಿದ್ದಾರೆ. ನಮ್ಮ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ಮಕ್ಕಳು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಸೇರಿಸಿ ಹೊರಟುಹೋಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂಥ ಪರಿತ್ಯಕ್ತ ಹಿರಿಯ ನಾಗರಿಕರನ್ನು ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.

ಹಿರಿಯ ನಾಗರಿಕರ ಕಾಯ್ದೆಯಡಿ ಕಾನೂನು ಕ್ರಮ

ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

"ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ" ಎಂದು ಡಾ. ಪಾಟೀಲ್ ಹೇಳಿದರು.

ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X