ಜಾತಿಗಣತಿ ವರದಿ ಕುರಿತು ಈಗಲೇ ಚರ್ಚಿಸುವುದು ಸಾಧುವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ರಾಜ್ಯದಲ್ಲಿ ಜಾತಿಗಣತಿ ವರದಿ ಕುರಿತು ಈಗಲೇ ಚರ್ಚೆ ಸಾಧುವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮಂಗಳವಾರ ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.
ವೀರಶೈವ ಲಿಂಗಾಯತರಲ್ಲಿ 103 ಉಪ ಪಂಗಡಗಳಿವೆ. ಅದರಲ್ಲಿ ಯಾವುದೇ ಪಂಗಡಗಳಿಗೂ ಅನ್ಯಾಯವಾಗದಂತೆ ಕ್ರಮವಹಿಸಲಾಗುವುದು. ಅನ್ಯ ಸಮುದಾಯಗಳ ಹೇಳಿಕೆಗಳಿಗೆ ನಾನು ಈ ಸಂದರ್ಭದಲ್ಲಿ ಪ್ರತಿಕ್ರಿಯಿಸುವುದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
Next Story