ಸಿಎಂ ಸಿದ್ದರಾಮಯ್ಯ, ಸಚಿವ ಝಮೀರ್ ಅಹ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಬಂಧನ

ಮೋಹಿತ್ ನರಸಿಂಹ ಮೂರ್ತಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕಾಟನ್ ಪೇಟೆ ಹಾಗೂ ತುಮಕೂರಿನ ಕೊರಟಗೆರೆಯಲ್ಲಿ ಮೋಹಿತ್ ವಿರುದ್ಧ ದೂರು ದಾಖಲಾಗಿತ್ತು. ಉತ್ತರಾಖಾಂಡದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತುಮಕೂರು ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೋಹಿತ್ ನರಸಿಂಹ ಮೂರ್ತಿ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಜತೆಗೆ ಜಾತಿ ನಿಂದನೆ ಕೂಡಾ ಮಾಡಿದ್ದ ಆರೋಪ ಎದುರಿಸುತ್ತಿದ್ದ. ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ಮೋಹಿತ್ ನನ್ನು ಪೊಲೀಸರು ಮೊಬೈಲ್ ಟವರ್ ಪತ್ತೆ ಹಚ್ಚಿ ಉತ್ತರಾಖಂಡದಲ್ಲಿ ಬಂಧಿಸಿ ಕರೆತರುತ್ತಿದ್ದಾರೆ. ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
Next Story