‘ಯುವನಿಧಿ’ಗೆ ಎರಡು ದಿನದಲ್ಲಿ ಆರು ಸಾವಿರಕ್ಕೂ ಅಧಿಕ ಮಂದಿ ಅರ್ಜಿ
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ‘ಯುವನಿಧಿ’ ಯೋಜನೆಗೆ ಎರಡೇ ದಿನದಲ್ಲಿ ಒಟ್ಟು 6 ಸಾವಿರಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಡಿ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದರು, ಅರ್ಹ ಅಭ್ಯರ್ಥಿಗಳು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಡಿ.28ರ ಸಂಜೆ 6ಗಂಟೆಯ ವೇಳೆ ಒಟ್ಟು 6,062 ಮಂದಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಭತ್ತೆ, ಡಿಪ್ಲೋಮಾ ಮಾಡಿ ನಿರುದ್ಯೋಗಿ ಯಾಗಿರುವವರಿಗೆ ಮಾಸಿಕ 1,500 ರೂ. ಭತ್ತೆ ನೀಡುವ ‘ಯುವನಿಧಿ’ ಯೋಜನೆಗೆ ನಿರುದ್ಯೋಗಿಗಳಿಂದ ಭಾರೀ ಸ್ಪಂದನೆ ಸಿಕ್ಕಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story