ಬೆಂಗಳೂರಿಗೆ ಆಗಮಿಸಿದ ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ ಶರೀರ
ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರು ತಲುಪಿದೆ.
ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಇಂಧನ ಸಚಿವ ಕೆ.ಜೆ.ಜಾರ್ಜ್, ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸಹಿತ ಯೋಧ ಪ್ರಾಂಜಲ್ ಕುಟುಂಬದ ಸದಸ್ಯರು, ಸೇನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
“ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ” ಎಂದು ಸಿದ್ದರಾಮಯ್ಯ ಹೇಳಿದರು.
Next Story