ಸಂವಿಧಾನದ ಬಗ್ಗೆ ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ : ಆರ್.ಅಶೋಕ್
ʼಸಂವಿಧಾನ ತಿದ್ದುಪಡಿʼ ಮಾಡಲು ಬಿಜೆಪಿ 400ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದಿದ್ದ ಸಂಸದ
ಬೆಂಗಳೂರು: ಭಾರತದ ಸಂವಿಧಾನದ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೂ ಭಾರತೀಯ ಜನತಾ ಪಕ್ಷದ ಅಧಿಕೃತ ನಿಲುವಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, "ಭಾರತೀಯ ಜನತಾ ಪಕ್ಷಕ್ಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂವಿಧಾನ ಎಂದರೆ ಕೇವಲ ಒಂದು ಗ್ರಂಥವಲ್ಲ. ಸಂವಿಧಾನ ಅಂದರೆ ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ, ಬಲಿದಾನಗೈದ ಅಸಂಖ್ಯಾತ ಮಹನೀಯರ ತ್ಯಾಗದ ದ್ಯೋತಕ, ಆಶಯಗಳ ಪ್ರತೀಕ" ಎಂದು ತಿಳಿಸಿದ್ದಾರೆ.
"ಸಂವಿಧಾನಕ್ಕೆ ಅಪಚಾರ ಮಾಡುವ ಅಥವಾ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಕೆಲಸವನ್ನ ಬಿಜೆಪಿ ಈ ಹಿಂದೆಯೂ ಮಾಡಿಲ್ಲ, ಮುಂದೆಂದಿಗೂ ಮಾಡುವುದೂ ಇಲ್ಲ. ಅಷ್ಟೇ ಅಲ್ಲ ಅಂತಹ ಮಾತು ಆಡುವುದನ್ನು ಸಹಿಸುವುದೂ ಇಲ್ಲ" ಎಂದು ಹೇಳಿದ್ದಾರೆ.
ಭಾರತದ ಸಂವಿಧಾನದ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೂ ಭಾರತೀಯ ಜನತಾ ಪಕ್ಷದ ಅಧಿಕೃತ ನಿಲುವಿಗೂ ಯಾವುದೇ ಸಂಬಂಧವಿಲ್ಲ.ಭಾರತೀಯ ಜನತಾ ಪಕ್ಷಕ್ಕೆ ಮತ್ತು ಪ್ರಧಾನಿ ಶ್ರೀ @narendramodi ಅವರಿಗೆ ಸಂವಿಧಾನ ಎಂದರೆ ಕೇವಲ ಒಂದು ಗ್ರಂಥವಲ್ಲ. ಸಂವಿಧಾನ ಅಂದರೆ ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ, ಬಲಿದಾನಗೈದ… pic.twitter.com/yeBiiqMprK
— R. Ashoka (ಮೋದಿ ಅವರ ಕುಟುಂಬ) (@RAshokaBJP) March 10, 2024