ಮುಡಾ ಪ್ರಕರಣ | ಸಿಎಂ ವಿರುದ್ಧ ಖಾಸಗಿ ದೂರು : ಆದೇಶ ಕಾಯ್ದಿರಿಸಿದ ಕೋರ್ಟ್
ಸಿದ್ದರಾಮಯ್ಯ(PTI)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಖಾಸಗಿ ದೂರು ಬಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ.
ಆರ್.ಟಿ.ಐ.ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರ ಸಲ್ಲಿಸಿದ್ದ ಖಾಸಗಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆದೇಶ ಕಾಯ್ದಿರಿಸಿ, ವಿಚಾರಣೆಯನ್ನು ಆ.13ಕ್ಕೆ ಮುಂದೂಡಿದರು.
ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಬಗ್ಗೆ ಅಂದು ಆದೇಶ ಸಾಧ್ಯತೆ ಇದೆ.
Next Story