Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ...

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಪಕ್ಷವೇ ನಿಲ್ಲಲಿದೆ : ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ3 Aug 2024 12:38 PM IST
share
ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಪಕ್ಷವೇ ನಿಲ್ಲಲಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ, ವಿನಾ ಕಾರಣ ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್ ಪಕ್ಷವೇ ನಿಲ್ಲಲಿದೆ ಎಂದು ಶಿಕ್ಷಣ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ನಡೆಸುತ್ತಿವೆ.ಈ ಕುರಿತು ಸದನದ ಕಲಾಪದಲ್ಲೇ ಸಿಎಂ ಉತ್ತರ ನೀಡಿದ್ದಾರೆ. ಭ್ರಷ್ಟಾಚಾರ ಎಷ್ಟೇ ಪ್ರಮಾಣದಲ್ಲಿದ್ದರೂ ಭ್ರಷ್ಟಾಚಾರವೇ. ಅದರಲ್ಲಿ ಯಾವುದೇ ರಾಜಿ ಇಲ್ಲ. ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ದ ಕ್ರಮ‌ಕೈಗೊಳ್ಳುವುದಾಗಿ ತಿಳಿಸಿದ್ದಾರೆ" ಎಂದರು.

2012ರಲ್ಲಿ ಬಿಜೆಪಿ ಪಕ್ಷವೇ ಅಧಿಕಾರದಲ್ಲಿತ್ತು. ಬಿಜೆಪಿಯವರೇ ಮುಡಾದ ಅಧ್ಯಕ್ಷರಾಗಿದ್ದರು. ನಿವೇಶನ ಹಂಚಿಕೆ ನಡೆದಾಗ ಎಲ್ಲಾ ಪಕ್ಷದವರೂ ನಿವೇಶನ ಪಡೆದಿದ್ದಾರೆ .ಆಗ ಯಾರೂ ಏನನ್ನೂ ಮಾತನಾಡಲಿಲ್ಲ. ಹಿಂದುಳಿದ ವರ್ಗದ ನಾಯಕರೊಬ್ಬರು ಸಿಎಂ ಆಗಿದ್ದನ್ನು ಸಹಿಸದೇ ಮೈತ್ರಿ ಪಕ್ಷದ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಅವರ ಬಳಿ ಮನವಿ ಮಾಡುತ್ತೇನೆ. ಬಿಜೆಪಿ ಅವಧಿಯಲ್ಲಾದ ಎಲ್ಲರ ಹಗರಣ ಹೊರಗೆ ತೆಗೆಯಬೇಕು ಎಂದು ಆಗ್ರಹಿಸಿದರು.

ಮಳೆ ಹಾನಿ ಪರಿಹಾರ:ರಾಜ್ಯದ ಎಲ್ಲಾ ಡ್ಯಾಂ ಗಳು ಭರ್ತಿಯಾಗಿವೆ. ಮಳೆ ಹೆಚ್ಚಾದ ಹಿನ್ನಲೆಯಲ್ಲಿ ಭೂ ಕುಸಿತ ಸಂಭವಿಸುತ್ತಿದೆ. ಹಾಗಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಅಲ್ಲದೇ ಜಿಲ್ಲೆಯಲ್ಲೂ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಈ ಬಗ್ಗೆ ಡಿಸಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ನೆರೆಯಿಂದ ಹಾನಿಯಾದ ಜಾಗದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿ ಮೇಲೆ ಗಮನ ಹರಿಸುವಂತೆ ಸಿಎಂ‌ ಸೂಚಿಸಿದ್ದಾರೆ. ಮಳೆಯಿಂದ ಬಿದ್ದ ಅನಧಿಕೃತ ಮನೆಗಳಿಗೆ 1.20 ಲಕ್ಷ ಹಾಗೂ ದಿನಸಿಗೆ ಸ್ಥಳೀಯ ಆಡಳಿತದ ವತಿಯಿಂದ ಆರ್ಥಿಕ ನೆರವು ನೀಡಲು ಸರ್ಕಾರ ನಿರ್ಧರಿಸಿದೆ. ಹಾಗೆಯೇ ಮನೆ ಕಳೆದುಕೊಂಡವರಿಗೆ ಹೊಸ ಮನೆ ನೀಡಲಾಗುವುದು. ಮಳೆಯಿಂದ ನೊಂದವರ ಪರ ಸರ್ಕಾರ ಇದೆ ಎಂದರು.

ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿ.ವೈ.ವಿಜಯೇಂದ್ರ,ಅವರ ಪಕ್ಷದ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಗಳಿಗೆ ಉತ್ತರ ನೀಡಬೇಕು. ಡಿಕೆಶಿ ಬಗ್ಗೆ ಆರೋಪಿಸುವ ವಿಜಯೇಂದ್ರ‌ ಎಲ್ಲಿದ್ದರು, ಇವರು ಏನು ಕೆಲಸ ಮಾಡುತ್ತಿದ್ದರು. ಅವರ ಆಸ್ತಿ ಎಷ್ಟು, ಅವರ ಆಸ್ತಿ ಹೇಗೆ ಬಂತು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರದ ಅನುಮತಿ:

ಶರಾವತಿ ಪಂಪ್ಡ್ ಸ್ಟೋರೇಜ್‌ಗೆ ಕೇಂದ್ರ ಅನುಮತಿ ನೀಡಿದೆ. ಈ ಯೋಜನೆಯ ಅಗತ್ಯವಿದೆ, ಇದರಿಂದ ಯಾವುದೇ ಹೆಚ್ಚಿನ ಪ್ರಮಾಣದ ಅರಣ್ಯ ಹಾನಿಯಾಗುವುದಿಲ್ಲ. ಯೋಜನೆಯಿಂದ ಹೆಚ್ಚಿನ ಪ್ರಮಾಣದ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದರು

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X