ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಸಿದ್ದರಾಮಯ್ಯ(PTI)
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎ2 ಹಾಗೂ ಬಾಮೈದ ಮಲ್ಲಿಕಾರ್ಜುನಸ್ವಾಮಿ ಎ3 ಆರೋಪಿ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಲೋಕಾಯುಕ್ತ ಎಸ್ಪಿ ಸಿಎಂ ವಿರುದ್ಧ ಎಫ್ಐಆರ್. ದಾಖಲು ಮಾಡುವ ಬಗ್ಗೆ ಬೆಂಗಳೂರು ಕೇಂದ್ರ ಕಚೇರಿಗೆ ಪತ್ರ ಬರೆದಿದ್ದರು. ಅವರಿಂದ ಆದೇಶ ಬಂದ ಹಿನ್ನಲೆಯಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
Next Story