ಮುಡಾ ನಿವೇಶನ ಹಂಚಿಕೆ ಪ್ರಕರಣ : ಮಾಜಿ ಆಯುಕ್ತ ಈಡಿ ವಶಕ್ಕೆ
- ಸಾಂದರ್ಭಿಕ ಚಿತ್ರ(PC: PTI)
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ.
ವಿಚಾರಣೆಗೆ ಸಹಕರಿಸದ ನಟೇಶ್ ಅವರನ್ನು ಮಂಗಳವಾರ ವಶಕ್ಕೆ ಪಡೆದು ಬೆಂಗಳೂರಿನ ಶಾಂತಿನಗರ ಈಡಿ ಕಚೇರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರಣೆ ಬಳಿಕ ಪ್ರಕರಣ ಸಂಬಂಧ ನಟೇಶ್ ಅವರನ್ನು ಬಂಧಿಸುವ ಸಾಧ್ಯತೆಯು ಹೆಚ್ಚಾಗಿದೆ. ಮುಡಾ ಆಯುಕ್ತರಾಗಿದ್ದ ನಟೇಶ್ ಅವರು ನಿವೇಶನ ಅಕ್ರಮ ಹಂಚಿಕೆಯಾಗಲು ಕಾರಣ ಎನ್ನುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ನಟೇಶ್ ಮನೆ ಮೇಲೆ ನಿನ್ನೆಯಷ್ಟೇ ಈಡಿ ದಾಳಿ ನಡೆಸಿ ಶೋಧ ನಡೆಸಿದ್ದರು. ಆದರೆ, ಈ ವೇಳೆ ತನಿಖೆಗೆ ನಟೇಶ್ ಅವರು ಸಹಕರಿಸಿಲ್ಲ ಎನ್ನಲಾಗಿದೆ.
Next Story