ಮುಡಾ ಅಕ್ರಮ | ಸಿಬಿಐಗೆ ವರ್ಗಾಯಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜ.27ಕ್ಕೆ ಮುಂದೂಡಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಸಿಎಂ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಅಭಿಷೇಕ್ ಮನುಸಿಂಘ್ವಿ, ರಾಜ್ಯ ಸರಕಾರದ ಪರವಾಗಿ ಕಪಿಲ್ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ಅವರು ಪೀಠದ ಮುಂದೆ ವಾದ ಮಂಡಿಸಿದರು.
Next Story