ವಾಲ್ಮೀಕಿ ನಿಗಮ, ಮೂಡಾ ಹಗರಣ ಆರೋಪ: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು, ಜು.3: ವಾಲ್ಮೀಕಿ ನಿಗಮದಲ್ಲಿ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಬುಧವಾರ ನಗರದ ಶಿವಾನಂದ ವೃತ್ತದಿಂದ ಕಾಲ್ನಡಿಗೆ ಮೂಲಕ ಮುಖ್ಯಮಂತ್ರಿಯ ಸರಕಾರಿ ನಿವಾಸ ಕಾವೇರಿಯತ್ತ ತೆರಳಲು ಯತ್ನಿಸಿದಾಗ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆಯಿತು.
ಬಳಿಕ ಪೊಲೀಸರು ವಿಜಯೇಂದ್ರ, ಸಿ.ಟಿ.ರವಿ, ಸುರೇಶ್ ಕುಮಾರ್, ಅರವಿಂದ ಬೆಲ್ಲದ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕ ಸುರೇಶ್ ಗೌಡ, ಸುನೀಲ್ ಕುಮಾರ್ ಸೇರಿದಂತೆ ಇನ್ನಿತರರನ್ನು ವಶಕ್ಕೆ ಪಡೆದು ಬಸ್ ನಲ್ಲಿ ಕೂರಿಸಿ ಕರೆದೊಯ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.
Next Story