ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ‘ನಂದಿನಿʼ ತುಪ್ಪವನ್ನೇ ಬಳಸಲು ಸುತ್ತೋಲೆ
ಬೆಂಗಳೂರು : ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಶುಕ್ರವಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಲಾಗಿದೆ.
Next Story