‘ನಶೆ ಮುಕ್ತ ಕರ್ನಾಟಕ’ ಆ್ಯಪ್ ಕಾರ್ಯಾರಂಭ : ಡ್ರಗ್ಸ್ ಪ್ರಕರಣಗಳ ಮಾಹಿತಿ ಹಂಚಿಕೊಳ್ಳಲು ತಿಳಿಸಿದ ಪೊಲೀಸ್ ಇಲಾಖೆ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಮುಂದಾಗಿರುವ ರಾಜ್ಯ ಪೊಲೀಸ್ ಇಲಾಖೆಯು ಮಾದಕ ವಸ್ತು ಸಾಗಣೆ ಹಾಗೂ ಮಾರಾಟದ ಕುರಿತಂತೆ ಮಾಹಿತಿ ಹಂಚಿಕೊಳ್ಳಲು ‘ನಶೆ ಮುಕ್ತ ಕರ್ನಾಟಕ’ ಎಂಬ ಆ್ಯಪ್ ಅಭಿವೃದ್ಧಿಪಡಿಸಿದ್ದು, ಸಾರ್ವಜನಿಕರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಿದೆ.
ನಶೆ ಮುಕ್ತ ಕರ್ನಾಟಕ ಆ್ಯಪ್ ಮೂಲಕ ಸಾರ್ವಜನಿಕರು ಡ್ರಗ್ಸ್ ಪ್ರಕರಣಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಬಹುದು. ಮಾಹಿತಿ ನೀಡಿದವರ ಗೌಪ್ಯತೆ ಕಾಯ್ದುಕೊಳ್ಳಲಾಗುವುದು. ಈ ಮೂಲಕ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಸಹಕರಿಸಬೇಕು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಮಾದಕ ವಸ್ತು ಮಾರಾಟ ಕಂಡು ಬಂದರೆ ಆ್ಯಪ್ ಮೂಲಕ ಯಾರು, ಎಲ್ಲಿಂದ ಬೇಕಾದರೂ ಮಾಹಿತಿ ಹಂಚಿಕೊಳ್ಳಬಹುದಾಗಿದೆ. ಇದಕ್ಕೂ ಮುನ್ನ ಗೂಗಲ್ ಪ್ಲೇ ಸ್ಟೋರ್ನಿಂದ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾಹಿತಿ ಹಂಚಿಕೊಳ್ಳವಂತೆ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಡ್ರಗ್ಸ್ ದಂಧೆ ಕಂಡುಬಂದ ಬಗ್ಗೆ ಮಾಹಿತಿ ಹಂಚಿಕೊಂಡರೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ರವಾನೆಯಾಗಲಿದೆ. ನಂತರ ಮಾಹಿತಿ ಖಚಿತತೆ ಆಧರಿಸಿ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.