Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫಿಸಿಯೋಥೆರಪಿ ಕೋರ್ಸ್‌ಗಳಿಗೆ ನೀಟ್...

ಫಿಸಿಯೋಥೆರಪಿ ಕೋರ್ಸ್‌ಗಳಿಗೆ ನೀಟ್ ಕಡ್ಡಾಯ: ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರಿನಲ್ಲಿ ʼಫಿಸಿಯೋಕಾನ್‌ -25 ಸಮ್ಮೇಳನʼ

ವಾರ್ತಾಭಾರತಿವಾರ್ತಾಭಾರತಿ25 April 2025 4:34 PM IST
share
ಫಿಸಿಯೋಥೆರಪಿ ಕೋರ್ಸ್‌ಗಳಿಗೆ ನೀಟ್ ಕಡ್ಡಾಯ: ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದ್ದು, ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ ಪೂರಕವಾಗಿರುತ್ತದೆ. ಸಾಮರ್ಥ್ಯ ಆಧಾರಿತ ಕಲಿಕೆ ಮತ್ತು ಹೆಚ್ಚುವರಿ ಕ್ಲಿನಿಕಲ್ ಮಾನ್ಯತೆಗಾಗಿ ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಫಿಸಿಯೋಥೆರಪಿಯ ಅಂತರರಾಷ್ಟ್ರೀಯ ಸಮ್ಮೇಳನವಾದ ʼಕರ್ನಾಟಕ ಫಿಸಿಯೋಕಾನ್ -25ʼ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಫಿಸಿಯೋಥೆರಪಿ ಕೋರ್ಸ್‌ಗಳ ಪ್ರವೇಶವನ್ನು ನೀಟ್ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರದ ಬೆಂಬಲವಿದೆ. ಶೈಕ್ಷಣಿಕ ಗುಣಮಟ್ಟ ಮತ್ತು ವೃತ್ತಿಪರ ಮಾನದಂಡಗಳನ್ನು ಹೆಚ್ಚಿಸುವ ನೀಟ್ ಅಡಿಯಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳ ಏಕೀಕರಣವನ್ನು ನಾವು ಸ್ವಾಗತಿಸುತ್ತೇವೆ ಎಂದು ಅವರು ಹೇಳಿದರು.

ಗಣನೀಯ ಸೇವೆ ನೀಡುತ್ತಿರುವ ಭೌತ ಚಿಕಿತ್ಸಕರು ಹೆರಿಗೆಯಿಂದ ವೃದ್ಧರ ಆರೈಕೆಯವರೆಗೆ, ಆರೋಗ್ಯ ರಕ್ಷಣೆಯಲ್ಲಿ ಭೌತಚಿಕಿತ್ಸಕರು ಪ್ರಮುಖ ಪಾತ್ರ ವಹಿಸುತ್ತಾರೆ. ಭೌತಚಿಕಿತ್ಸಕರು ನರ ಮತ್ತು ಮೂಳೆಚಿಕಿತ್ಸೆ ಪುನರ್‌ ಆರೈಕೆ, ಹೃದಯ ಶ್ವಾಸಕೋಶ ಆರೈಕೆ, ಮಕ್ಕಳ ಚಿಕಿತ್ಸೆ, ಅಂಗವೈಕಲ್ಯ ಚಿಕಿತ್ಸೆ, ಫಿಟ್ನೆಸ್ ಮತ್ತು ಸಮುದಾಯ ಆಧಾರಿತ ಆರೈಕೆಗೆ ಗಣನೀಯ ಕೊಡುಗೆ ನೀಡುತ್ತಾರೆ" ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ತರಬೇತಿ ಪಡೆದ ವೃತ್ತಿಪರರಿಗೆ ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ. ಇದನ್ನು ಪೂರೈಸಲು ಹೆಚ್ಚಿನ ಸರ್ಕಾರಿ ಕಾಲೇಜುಗಳಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳನ್ನು ಪರಿಚಯಿಸುವ ಚಿಂತನೆ ಇದೆ ಎಂದು ಡಾ.ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಪಠ್ಯಕ್ರಮ ಬದಲಾವಣೆ :

ರಾಷ್ಟ್ರೀಯ ಅಲೈಡ್ & ಹೆಲ್ತ್ ಪ್ರೊಫೆಷನಲ್ಸ್ ಆಯೋಗದ ಅಧ್ಯಕ್ಷರಾದ ಡಾ.ಯಜ್ಞ ಶುಕ್ಲಾ ಮಾತನಾಡಿ, ಭೌತಚಿಕಿತ್ಸೆಯ ಶಿಕ್ಷಣದಲ್ಲಿ ಒಂದು ರಾಷ್ಟ್ರ, ಒಂದು ಪಠ್ಯಕ್ರಮ ಉಪಕ್ರಮವನ್ನು ಪರಿಚಯಿಸಲು ಆಯೋಗ ಚಿಂತನೆ ನಡೆಸಿದೆ ಎಂದು ಹೇಳಿದರು,

ಪಠ್ಯಕ್ರಮ ಸುಧಾರಣೆಗಳು ವಿದ್ಯಾರ್ಥಿಗಳು ಮತ್ತು ವೈದ್ಯರಿಗೆ ವಿಶೇಷ ಪ್ರಯೋಜನಗಳೊಂದಿಗೆ ವೃತ್ತಿಯನ್ನು ಉನ್ನತೀಕರಿಸುವ ಮಾನದಂಡವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಇಸ್ರೇಲ್, ಆಸ್ಟ್ರೇಲಿಯಾ ಮತ್ತು ನೇಪಾಳದ ಭಾಷಣಕಾರರು, ಜಾಗತಿಕ ತಜ್ಞರು ಹಾಗೂ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. 50 ರಾಷ್ಟ್ರೀಯ ತಜ್ಞರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ 800ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಯಿತು.

ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್ ಉಪಸ್ಥಿತರಿದ್ದರು.

ಹೊಸ ಕಚೇರಿ ಕಟ್ಟಡ ಉದ್ಘಾಟನೆ :

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್‌ ಕೌನ್ಸಿಲ್ (ಕೆಎಸ್‌ಎಎಚ್‌ಸಿ) ನ ಹೊಸ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕೆಎಸ್‌ಎಎಚ್‌ಸಿ ಅಧ್ಯಕ್ಷ ಡಾ.ಯು.ಟಿ.ಇಫ್ತಿಕರ್ ಫರೀದ್ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X