ನೇಹಾ ಹಿರೇಮಠ್ ಹತ್ಯೆ ಪ್ರಕರಣ : ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ
ಬೆಂಗಳೂರು : ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಕೊಲೆ ಸಂಬಂಧ ರಾಜ್ಯಾದ್ಯಂತ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ನೇಹಾ ಹಿರೇಮಠ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಆದೇಶ ನೀಡಿದ್ದಾರೆ.
Next Story