ಹೊಸ ನಿಯಮ | ಇನ್ನು ಮುಂದೆ ಗುತ್ತಿಗೆದಾರರಿಗೆ 5 ವರ್ಷ ರಸ್ತೆ ನಿರ್ವಹಣೆ ಹೊಣೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ʼಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆʼ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು ‘ಇಲ್ಲಿಯವರೆಗೆ ಈ ನಿಯಮ ಇರಲಿಲ್ಲ. ಹೊಸದಾಗಿ ಜಾರಿ ಮಾಡುತ್ತಾ ಇದ್ದೇವೆ. ಗುತ್ತಿಗೆದಾರರಿಗೆ ಆ ಹೊಣೆ ನೀಡಲಾಗುವುದು. ಇನ್ನು ಟೆಂಡರ್ ಆಹ್ವಾನಿಸುವುದಿಲ್ಲ’ ಎಂದರು.
ʼʼಇದಲ್ಲದೇ, ಲೋಕೋಪಯೋಗಿ ಇಲಾಖೆಯಲ್ಲಿ ಸುಧಾರಣೆ ತರಲು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಈ ನಿಟ್ಟಿನಲ್ಲಿಯೇ ನಿರ್ವಹಣೆಯ ಜವಾಬ್ದಾರಿಯನ್ನು ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರಿಗೇ ನೀಡಲಾಗುವುದು. ಇನ್ನು ಇಲಾಖೆಯಲ್ಲಿ ಆ್ಯಪ್ ಸಿದ್ಧಪಡಿಸುತ್ತಿದ್ದು, ಅದು ಪ್ರಾಥಮಿಕ ಹಂತದಲ್ಲಿದೆ. ಇದು ಅನುಷ್ಠಾನಕ್ಕೆ ಬಂದರೆ ಹೆಚ್ಚು ಅನುಕೂಲ ಆಗಲಿದೆʼʼ ಎಂದು ಅವರು ಮಾಹಿತಿ ನೀಡಿದರು.
Next Story