ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಡಾ. ಮುಹಮ್ಮದ್ ಮುಯಿಝ್ಝು
ಬೆಂಗಳೂರು: ಬೆಂಗಳೂರು ಭೇಟಿಗಾಗಿ ಇಂದು ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮುಹಮ್ಮದ್ ಮುಯಿಝ್ಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮುಹಮ್ಮದ್ ಹಾಗೂ ಅವರ ನಿಯೋಗ ವನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗ ಡಾ. ಎನ್. ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸಹಿತ ಹಲವು ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story