ನಮ್ಮ ಸರ್ಕಾರ ಟೇಕಾಫ್ ಆಗಿದೆ; ಬಿಜೆಪಿಗರೇ ವಿರೋಧ ಪಕ್ಷ ನಾಯಕನೆಲ್ಲಿ?: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಸರಕಾರ ರಚನೆಯಾಗಿ ತಿಂಗಳು ಕಳೆದರೂ, ರಾಜ್ಯದಲ್ಲಿ ವಿರೋಧ ಪಕ್ಷ ಇಲ್ಲವೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೇಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು. ಸದನವೂ ಪ್ರಾರಂಭವಾಯ್ತು. ಬಿಜೆಪಿಗರೇ ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ ಎಂದು ಪ್ರಶ್ನಿಸಿದೆ.
ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ. ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ ಎಂದು ಟೀಕಿಸಿದೆ.
ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ ಫಿಕ್ಸ್ ಮಾಡಲಾಗಿತ್ತು. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಬಿಜೆಪಿ ಪಕ್ಷದ ನಾಯಕರು ಉತ್ತರಿಸಬೇಕು ಎಂದು ಸವಾಲು ಹಾಕಿದೆ.
ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ?
— Karnataka Congress (@INCKarnataka) July 3, 2023
ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು,
ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ?
ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ?@BJP4Karnataka ಉತ್ತರಿಸಬೇಕು.