ಉಪಚುನಾವಣೆ: ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳ ಉಪ ಚುನಾವಣೆ ನ.13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿನ ಮತದಾರರಾಗಿರುವ ಸರಕಾರಿ ನೌಕರರು, ಖಾಸಗಿ ಕಂಪೆನಿಗಳಲ್ಲಿ ಎಲ್ಲ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ರಜೆ ಘೋಷಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸೋಮವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದಶಿ ಈ ಸಂಬಂಧ ಆದೇಶ ಹೊರಡಿಸಿದ್ದು, 3 ಕ್ಷೇತ್ರಗಳ ವ್ಯಾಪ್ತಿಯ ಎಲ್ಲ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೆ ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ ಎಂದು ತಿಳಿಸಲಾಗಿದೆ.
Next Story