ವಿಪಕ್ಷಗಳ ಧರಣಿ, ಗದ್ದಲದ ನಡುವೆ ಐದು ವಿಧೇಯಕಗಳಿಗೆ ಅಂಗೀಕಾರ
ಬೆಳಗಾವಿ: ‘ಸ್ಪೀಕರ್ ಸ್ಥಾನಕ್ಕೆ ಅಗೌರವ’ ತೋರಿರುವ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ, ಗದ್ದಲ ನಡೆಸುತ್ತಿದ್ದ ಮಧ್ಯೆಯೆ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ ಸೇರಿದಂತೆ ಐದು ಮಹತ್ವದ ವಿಧೇಯಕಗಳು ಅಂಗೀಕರಿಸಲ್ಪಟ್ಟವು.
2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ(ಎರಡನೇ ತಿದ್ದುಪಡಿ)ವಿಧೇಯಕ, ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ(ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಟಾಂಪು(ತಿದ್ದುಪಡಿ)ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕ ಹಾಗೂ ಕರಾವಳಿ ಅಭಿವೃದ್ಧಿ ಮಂಡಲಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿತು.
Next Story