Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೊಡವರಿಗೆ ಪ್ರತ್ಯೇಕ ಸ್ಥಾನಮಾನ...

ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ಪ್ರಶ್ನಿಸಿ ಮೂಲ ನಿವಾಸಿಗಳಿಂದ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ

ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ1 April 2024 11:10 PM IST
share
ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ಪ್ರಶ್ನಿಸಿ ಮೂಲ ನಿವಾಸಿಗಳಿಂದ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ

ಬೆಂಗಳೂರು: ಕೊಡವರಿಗೆ ಪ್ರತ್ಯೇಕ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕವಾಗಿ ಸ್ವಯಂ ರಾಜಕೀಯ ನಿರ್ಣಯಗಳ ಹಕ್ಕು ನೀಡುವ ಸಂಬಂಧ ಸಲ್ಲಿಸಲಾಗಿರುವ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ, ಕೊಡಗು ಜಿಲ್ಲೆಯ ಮೂಲ ನಿವಾಸಿ ಎಸ್ಸಿ, ಎಸ್ಟಿ, ಬುಡಕಟ್ಟು ಹಾಗೂ ಆದಿವಾಸಿ ಸಮುದಾಯಗಳು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿವೆ.

ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಲ್ಲಿಸಿರುವ ಮನವಿ ಪರಿಗಣಿಸಬೇಕು ಹಾಗೂ ಈ ಸಂಬಂಧ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಸುವ ಪ್ರತ್ಯೇಕ ಆಯೋಗ ರಚಿಸಲು ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಮಧ್ಯಂತರ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಈ ಅರ್ಜಿಯಲ್ಲಿ ಮಾಡಲಾಗಿರುವ ಮನವಿ ಪರಿಗಣಿಸಲ್ಪಟ್ಟರೆ ಅದು ಇಡೀ ಜಿಲ್ಲೆಯ ಮೂಲ ನಿವಾಸಿ ಬುಡಕಟ್ಟು ಜನಾಂಗಗಳ ಬದುಕು ಮತ್ತು ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದರು.

ಅಲ್ಲದೆ, ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾದರೂ, ಒಂದು ಸೀಮಿತ ಸಮುದಾಯಕ್ಕೆ ಮಾತ್ರ ಲಾಭವನ್ನುಂಟು ಮಾಡಲಿದೆ. ಅರ್ಜಿದಾರರ ಮನವಿ ಪ್ರತ್ಯೇಕ ರಾಜ್ಯದ ಬೇಡಿಕೆಯ ಸ್ವರೂಪದ್ದಾಗಿದ್ದು, ಮೂಲ ಅರ್ಜಿಯಲ್ಲಿನ ಬೇಡಿಕೆಗಳು ಇಡೀ ಕೊಡವ ಜಿಲ್ಲೆಯ ಜನತೆ ಅದರಲ್ಲೂ ವಿಶೇಷವಾಗಿ ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.30ರಷ್ಟು ಇರುವ ಎಸ್ಸಿ-ಎಸ್ಟಿ, ಆದಿವಾಸಿ, ಬುಡಕಟ್ಟು, ಒಬಿಸಿ ವರ್ಗಗಳ ಮೇಲೆ ಪರಿಣಾಮ ಉಂಟು ಮಾಡಲಿದೆ. ಆದ್ದರಿಂದ ಮಧ್ಯಂತರ ಅರ್ಜಿ ವಿಚಾರಣೆಗೆ ಅಂಗೀಕರಿಸಿ, ನಮ್ಮ ಅಹವಾಲು ಆಲಿಸಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರ ಸುಬ್ರಮಣಿಯನ್ ಸ್ವಾಮಿ, ಸಂವಿಧಾನದತ್ತ ಅವಕಾಶವಾಗಿರುವ ಪ್ರತ್ಯೇಕ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕವಾಗಿ ಸ್ವಯಂ ರಾಜಕೀಯ ನಿರ್ಣಯಗಳ ಹಕ್ಕು ನೀಡಬೇಕು ಎಂಬುದಷ್ಟೇ ನಮ್ಮ ಬೇಡಿಕೆಯಾಗಿದೆ. ಪ್ರತ್ಯೇಕ ರಾಜ್ಯದ ಬೇಡಿಕೆ ಖಂಡಿತಾ ನಮ್ಮದಲ್ಲ. ಈ ವಿಚಾರದಲ್ಲಿ ಕೊಡಗಿನವರ ಬಗ್ಗೆ ಇಲ್ಲಸಲ್ಲದ ಸುದ್ದಿಗಳನ್ನು ಹರಿಯಬಿಡಲಾಗುತ್ತಿದೆ ಎಂದರು.

ಈ ವೇಳೆ ಮಧ್ಯಂತರ ಅರ್ಜಿ ವಿಚಾರಣೆಗೆ ಅಂಗೀಕರಿಸಿದರೆ ವಿಷಯವನ್ನು ಇನ್ನಷ್ಟು ವಿಸ್ತೃತವಾಗಿ ಪರಾಮರ್ಶಿಸುವ ಅವಕಾಶಗಳು ಸಿಕ್ಕಂತಾಗುವುದಿಲ್ಲವೇ ? ಎಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಮಧ್ಯಂತರ ಅರ್ಜಿ ಪರಿಗಣಿಸುವುದಕ್ಕೆ ತಮ್ಮದೇನು ಅಭ್ಯಂತರವಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದರು.

ಆಗ ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಪೀಠ, ಮೂಲ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮಧ್ಯಂತರ ಅರ್ಜಿದಾರರಿಗೆ ಮತ್ತು ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮೂಲ ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X