ಮುರುಘಾ ಶ್ರೀ ವಿರುದ್ಧದ ಪೊಕ್ಸೊ ಪ್ರಕರಣ: ಓರ್ವ ಆರೋಪಿಗೆ ಷರತ್ತುಬದ್ಧ ಜಾಮೀನು
ಬೆಂಗಳೂರು, ಅ.13: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೊಕ್ಸೊ ಮತ್ತು ಎಸ್-ಎಸ್ಟಿ ದೌರ್ಜನ್ಯ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಪರಮಶಿವಯ್ಯಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪರಮಶಿವಯ್ಯ ಜಾಮೀನು ಕೋರಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದ. ಇದರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.
ಅರ್ಜಿದಾರ 2 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಭದ್ರತೆ ನೀಡಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
Next Story