ಪೋಕ್ಸೊ ಪ್ರಕರಣ | ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
ಚಿತ್ರದುರ್ಗ : ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಹೈಕೋರ್ಟ್ ಮುರುಘಾಶ್ರೀ ಅವರಿಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸರ್ವೋಚ್ಚ ನ್ಯಾಯಾಲಯ ಆದೇಶಿಸಿತ್ತು. ಸಂತ್ರಸ್ತೆಯ ಇಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.
Next Story