ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿದ್ದರಾಮಯ್ಯ
ಬೆಂಗಳೂರು, ಆ.27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.
Next Story