ಸಿದ್ದರಾಮಯ್ಯ ಅವರನ್ನು ನಿಂದಿಸಿರುವ ಅನಂತಕುಮಾರ್ ಹೆಗಡೆ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ: ಡಾ.ಜಿ. ಪರಮೇಶ್ವರ್
ಬೆಂಗಳೂರು: ಪ್ರಚೋನಕಾರಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ದಾಖಲಿಸುವ ಬಗ್ಗೆ ನಾನೇನು ಪೊಲೀಸರಿಗೆ ಸೂಚನೆ ಕೊಟ್ಟಿಲ್ಲ. ಆದರೆ, ಪೊಲೀಸರಿಗೆ ಅವರ ಕೆಲಸ ಏನು ಎಂದು ಗೊತ್ತಿದೆ. ಅನಂತಕುಮಾರ್ ವಿರುದ್ಧ ಕಾನೂನಿನಡಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಕೇಂದ್ರದಲ್ಲಿ ಸಚಿವರಾಗಿದ್ದವರು ಜವಾಬ್ದಾರಿಯಿಂದ ಮಾತನಾಡಬೇಕು. ಯಾರೂ ಇಂತಹ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದ ಅವರು, ಕಳೆದ ಮೂರು ವರ್ಷಗಳಿಂದ ಅವರು ಏನು ಮಾತನಾಡಿರಲಿಲ್ಲ. ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಚುನಾವಣೆ ಬರುತ್ತಿದೆ. ಈಗ ಹೇಳಿಕೆ ಕೊಡುತ್ತಿದ್ದಾರೆ ಎಂದು ಅವರು ಹೇಳಿದರು.
Next Story