ಪೊನ್ನಂಪೇಟೆ | ಕಾರು ಢಿಕ್ಕಿ: ಬೈಕ್ ಸವಾರ ಸಾವು
ಮಡಿಕೇರಿ ನ.22: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ನಡೆದಿದೆ.
ಕೋತೂರು ಗ್ರಾಮದ ನಿವಾಸಿ ಶಶಿ(23) ಮೃತಪಟ್ಟವರು. ಬೋಸ್ ಮಂದಣ್ಣ ಎಂಬವರಿಗೆ ಸೇರಿದ ಕಾರು ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಶಿ ಅವರು ಗೋಣಿಕೊಪ್ಪ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಪೊನ್ನಂಪೇಟೆ ಕಡೆಯಿಂದ ಬಾಳೆಲೆಗೆ ಹೋಗುತ್ತಿದ ಬೈಕ್ ಹಾಗೂ ಬಾಳೆಲೆಯಿಂದ ಪೊನ್ನಂಪೇಟೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿತು.
ಸ್ಥಳಕ್ಕೆ ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್ ಹಾಗೂ ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story