ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದ ಮೇಲೆ ಶನಿವಾರ ಟಿ.ನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರವಿಕುಮಾರ್ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 504, 505(1),(B)ರಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ rajee_ಹಿಂದೂ ಎಂಬ ಹೆಸರಿನ ಬಳಕೆದಾರನೊಬ್ಬ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಎಂದು ತಿಳಿದು ಬಂದಿದೆ.
Next Story